ಮುಖ್ಯ ವಿಷಯಕ್ಕೆ ತೆರಳಿ
Junubisahaara
ರಾಷ್ಟ್ರೀಯ

ದೇವನಹಳ್ಳಿಯಲ್ಲಿ ಕಾಲಿನ್ಸ್ ಏರೋಸ್ಪೇಸ್ ಘಟಕಕ್ಕೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಭೂಮಿ ಪೂಜೆ

1 ನಿಮಿಷ ಓದು
PB-SHABD

ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‌ನಲ್ಲಿ ’ಕಾಲಿನ್ಸ್ ಏರೋಸ್ಪೇಸ್’ ಸಂಸ್ಥೆಯು ಭಾರತದ ತನ್ನ ಮೊದಲ ನಿರ್ವಹಣೆ, ದುರಸ್ತಿ ಮತ್ತು ಪರಿಷ್ಕರಣೆ ಘಟಕ ಸ್ಥಾಪಿಸಲು ನಿರ್ಧರಿಸಿದೆ. ಈ ಘಟಕಕ್ಕೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಇದು ಏಷ್ಯಾ-ಪೆಸಿಫಿಕ್ ಮಾರುಕಟ್ಟೆಯಲ್ಲಿ ’ಕಾಲಿನ್ಸ್ ಏರೋಸ್ಪೇಸ್’ ತನ್ನ ಅಸ್ತಿತ್ವವನ್ನು ಬಲಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರ ೨೬ ಎಕರೆ ಜಮೀನನ್ನು ಈಗಾಗಲೇ ಮಂಜೂರು ಮಾಡಿದ್ದು, ಈ ಯೋಜನೆಯಿಂದ ೨ ಸಾವಿರದ ೧೦೦ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ದೇಶದ ಏರೋಸ್ಪೇಸ್ ವಲಯದಲ್ಲಿ ರಾಜ್ಯವು ಶೇಕಡಾ ೬೫ ರಷ್ಟು ಪಾಲನ್ನು ಹೊಂದಿದ್ದು, ಈ ಹೊಸ ಘಟಕವು ರಾಜ್ಯದಿಂದ ರಫ್ತು ಚಟುವಟಿಕೆಗಳನ್ನು ಉತ್ತೇಜಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

೨೦೩೧ರ ವೇಳೆಗೆ ಈ ವಲಯದಲ್ಲಿ ೬೦ ಸಾವಿರ ಕೋಟಿ ರೂಪಾಯಿ ಮೌಲ್ಯದ ಹೂಡಿಕೆಯನ್ನು ಆಕರ್ಷಿಸುವ ಮತ್ತು ೬೦ ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರವು ಹೊಸ ’ಏರೋಸ್ಪೇಸ್ ಮತ್ತು ರಕ್ಷಣಾ ನೀತಿ’ ಜಾರಿಗೆ ತಂದಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳು

ಎಲ್ಲಾ ನೋಡಿ