ಪ್ರಧಾನಿ ಮೋದಿ ನವೆಂಬರ್ 29ರಂದು 'ಮನ್ನ ಕಿ ಬಾತ್'ದಲ್ಲಿ ರಾಷ್ಟ್ರಕ್ಕೆ ಸಂದೇಶ


ಶೀಘ್ರವೇ ಸಂಸತ್ತಿನಲ್ಲಿ ಶೇಕಡ ೩೩ರಷ್ಟು ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂದು ಲೋಕಸಭಾಧ್ಯಕ್ಷ ಓಂ ಬಿರ್ಲಾ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಮನ್ವೆಲ್ತ್ ಮಹಿಳಾ ಸಂಸದೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಕರ್ನಾಟಕದ ಅನುಭವಮಂಟದಲ್ಲಿ ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು ಎಂದು ಸ್ಮರಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾಳೆ ಎಂದು ತಿಳಿಸಿದ್ದಾರೆ. ಮಹಿಳೆಯರು ಬಲಿಷ್ಠರಾಗಬೇಕೆಂಬ ನಿಟ್ಟಿನಲ್ಲಿ ಶಕ್ತಿ, ಗೃಹ ಲಕ್ಷ್ಮೀಗಳಂತಹ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಮಹಿಳಾ ಸಬಲೀಕರಣ ಮತ್ತು ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಕಾಮನ್ವೆಲ್ತ್ ಮಹಿಳಾ ಸಂಸದೀಯ ಸಂಸದರ ಭಾರತ ವಲಯದ ಅಧ್ಯಕ್ಷೆ ಡಿ.ಪುರಂದರೇಶ್ವರಿ ಅಭಿಪ್ರಾಯಪಟ್ಟಿದ್ದಾರೆ. ಶಾಸಕಾಂಗದ ಚರ್ಚೆಗಳಲ್ಲಿ ಅರ್ಥಪೂರ್ಣವಾಗಿ ಭಾಗವಹಿಸುವುದು, ನೀತಿ -ನಿರ್ಧಾರಗಳ ಮೇಲೆ ಪ್ರಭಾವ ಬೀರುವುದು ಮಹಿಳಾ ಸಬಲೀಕರಣದ ಪ್ರಮುಖ ಅಂಶಗಳಾಗಿವೆ ಎಂದು ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಮಹಿಳೆಯರಿಗೆ ಶೇಕಡಾ ೩೩ ರಷ್ಟು ಮೀಸಲಾತಿಯನ್ನು ನಿಗದಿತ ಕಾಲಮಿತಿಯೊಳಗೆ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.







